ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಪುಣೆಯಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಐಷಾರಾಮಿ ಬಸ್ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ 20 ಅಡಿ ಆಳದ ಕಂದಕಕ್ಕೆ ಬಿದ್ದಿದೆ. 

ಛತ್ರಪತಿ ಸಂಭಾಜಿನಗರದಲ್ಲಿ ಐಷಾರಾಮಿ ಬಸ್ಸೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಸುಮಾರು 20 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.


26 ಪ್ರಯಾಣಿಕರನ್ನು ಹೊತ್ತಿದ್ದ ಬಸ್ ಪುಣೆಯಿಂದ ನಾಗ್ಪುರಕ್ಕೆ ತೆರಳುತ್ತಿತ್ತು. ಕೇಂಬ್ರಿಡ್ಜ್ ಚೌಕ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದೆ ಎನ್ನಲಾಗಿದೆ.

ಅಪಘಾತದ ಬಳಿಕ ಸ್ಥಳೀಯ ನಿವಾಸಿಗಳು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.