ಮಾಗಡಿ ರಸ್ತೆ ಅಪಘಾತ, ಬೆಂಗಳೂರು ರಸ್ತೆ ಅಪಘಾತ, ಫಾರೆಸ್ಟ್ ಗೇಟ್ ಅಪಘಾತ, ಬೈಕ್ ಡಿಕ್ಕಿ, ಪಾದಚಾರಿ ಸಾವು

ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆ ಫಾರೆಸ್ಟ್ ಗೇಟ್ ಬಳಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಅರುಣ್ (46) ಮೃತಪಟ್ಟಿದ್ದಾರೆ.

ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿಯಾಗಿದ್ದ ಅರುಣ್, ಚಿಕ್ಕಗೊಲ್ಲರಹಟ್ಟಿಯಲ್ಲಿ ಸಹೋದರಿ ಪವಿತ್ರ ಅವರೊಂದಿಗೆ ವಾಸವಾಗಿದ್ದರು. ಮೂರು ದಿನಗಳ ಹಿಂದೆ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಫಾರೆಸ್ಟ್ ಗೇಟ್ ಬಳಿ ಬೈಕ್ ಡಿಕ್ಕಿ ಹೊಡೆದಿತ್ತು.


ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅರುಣ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ಸಂಬಂಧ ಸೋಲದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ.