Hubballi : ಹುಬ್ಬಳ್ಳಿಯ ಸಿದ್ದಾರೂಢ ಮಠದ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವಿದ್ಯಾಗೌಡರ್ ಎಂಬ ಮಹಿಳೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ ಮೃತಪಟ್ಟಿದ್ದಾರೆ..

Hubballi : ಹುಬ್ಬಳ್ಳಿಯಲ್ಲಿ ಗಾಳಿಪಟ ಹಾರಿಸಲು ಬಳಸುವ ಮಾಂಜಾ ದಾರದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾರೂಢ ಮಠದ ಬಳಿ ಈ ಘಟನೆ ನಡೆದಿದೆ.


ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರನ್ನು ವಿದ್ಯಾಗೌಡರ್ ಎಂದು ಗುರುತಿಸಲಾಗಿದೆ.


ಅಪಾಯಕಾರಿ ಮಾಂಜಾ ದಾರದ ಬಳಕೆಯಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಂತಹ ದಾರದ ಬಳಕೆಗೆ ಕಡಿವಾಣ ಹಾಕಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.