2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರಾಯಚೂರಿನ ಇಬ್ಬರು ಸಾಧಕರು ಆಯ್ಕೆಯಾಗಿದ್ದಾರೆ.
ಬಿಸಿಲನಾಡು ರಾಯಚೂರಿನ ಇಬ್ಬರು ಸಾಧಕರಿಗೆ 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಸಾಹಿತ್ಯ ಕ್ಷೇತ್ರದಲ್ಲಿ ವೀರ ಹನುಮಾನ್ ಹಾಗೂ ಜಾನಪದ ಕ್ಷೇತ್ರದಲ್ಲಿ ಈರಣ್ಣ ರುದ್ರಾಕ್ಷಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ದೇವದುರ್ಗದ ಅಲೆಮಾರಿ ಸಮುದಾಯದ ಈರಣ್ಣ ರುದ್ರಾಕ್ಷಿ ಅವರು ಕಳೆದ 50 ವರ್ಷಗಳಿಂದ ಹಗಲು ವೇಷಗಾರಿಕೆ ಹಾಗೂ ಜಾನಪದ ರಂಗಭೂಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸುದೀರ್ಘ ಕಲಾಸೇವೆಯನ್ನು ಗುರುತಿಸಿ ಸರ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಇನ್ನು ರಾಯಚೂರು ನಗರದ ವೀರ ಹನುಮಾನ್ ಅವರು ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ. ಸುಮಾರು 50 ಕೃತಿಗಳನ್ನು ರಚಿಸಿರುವ ಇವರು ಕನ್ನಡ ಸಾಹಿತ್ಯದಲ್ಲಿ ಹೈಕು ಕಾವ್ಯಪ್ರಕಾರವನ್ನು ಪರಿಚಯಿಸಿ, ಅದರ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ಸುಮಾರು 40 ವರ್ಷಗಳ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಇವರಿಗೂ ರಾಜ್ಯೋತ್ಸವ ಪ್ರಶಸ್ತಿ ಗೌರವ ಲಭಿಸಿದೆ.
ಒಟ್ಟಿನಲ್ಲಿ ಸಾಹಿತ್ಯ ಮತ್ತು ಜಾನಪದ ಕ್ಷೇತ್ರಗಳಲ್ಲಿ ರಾಯಚೂರಿನ ಇಬ್ಬರು ಸಾಧಕರಿಗೆ ರಾಜ್ಯಮಟ್ಟದ ಗೌರವ ಸಂದಿರುವುದು ಜಿಲ್ಲೆಯ ಹೆಮ್ಮೆಗೆ ಮತ್ತೊಂದು ಗರಿ ಮೂಡಿಸಿದೆ.