Shivamogga : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬುಕ್ಲಾಪುರ ಗ್ರಾಮದಲ್ಲಿ ಮನೆ ಮುಂದೆ ಮಲಗಿದ್ದ ನಾಯಿಯನ್ನು ಚಿರತೆ ಎಳೆದೊಯ್ದಿದೆ. 

Shivamogga : ಮನೆ ಮುಂದೆ ಮಲಗಿದ್ದ ನಾಯಿಯನ್ನು ಚಿರತೆಯೊಂದು ಎಳೆದೊಯ್ದ ಘಟನೆ ತೀರ್ಥಹಳ್ಳಿ ತಾಲೂಕಿನ ಬುಕ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮನೆಯ ಮುಂದೆ ನಾಯಿ ಮಲಗಿದ್ದ ವೇಳೆ ಬಂದ ಚಿರತೆ ಅದನ್ನು ಎಳೆದೊಯ್ದಿದೆ. ಈ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ವರದಿಯಾಗಿದೆ.

ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರೈತರು ಹಾಗೂ ಕೂಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ಭಯಪಡುತ್ತಿದ್ದಾರೆ. ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇದೇ ವೇಳೆ, ಜನರು ಎಚ್ಚರಿಕೆಯಿಂದ ಸಂಚರಿಸಬೇಕು ಮತ್ತು ಅರಣ್ಯ ಪ್ರದೇಶಗಳಲ್ಲಿ ಅನಗತ್ಯವಾಗಿ ಓಡಾಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.