Tumakuru : ರಾಜ್ಯದಲ್ಲಿ 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ ನಡೆದಿದೆ ಎನ್ನಲಾಗಿದೆ. 

Tumakuru : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆಯಾಗಿದ್ದು, 32 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವರ್ಗಾವಣೆಯಲ್ಲಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಅವರಿಗೂ ವರ್ಗಾವಣೆ ಆಗಿದೆ.


ಕಳೆದ ಮೂರು ವರ್ಷಕ್ಕೂ ಹೆಚ್ಚು ಕಾಲ ತುಮಕೂರಿನಲ್ಲಿ ಸೇವೆ ಸಲ್ಲಿಸಿರುವ ಅಶೋಕ್ ಕೆ.ವಿ. ಅವರು ತಮ್ಮ ಕಾರ್ಯವೈಖರಿಯಿಂದ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಅವರನ್ನು ಬೆಂಗಳೂರು ನಗರದ ಪೀಣ್ಯ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ ಎನ್ನಲಾಗಿದೆ.


ತುಮಕೂರಿನಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಅಶೋಕ್ ಕೆ.ವಿ. ಅವರ ವರ್ಗಾವಣೆಯ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.

ಇನ್ನು ತುಮಕೂರಿನ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯಾರನ್ನು ನೇಮಕ ಮಾಡಲಾಗುತ್ತದೆ ಎಂಬ ಕುತೂಹಲವೂ ಹೆಚ್ಚಾಗಿದೆ. ನೂತನ ಎಸ್‌ಪಿ ಹೆಸರು ಅಧಿಕೃತವಾಗಿ ಪ್ರಕಟವಾದ ಬಳಿಕ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.